ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನವಾಗಿದೆ. ಸುಮಾರು ನಾಲ್ಕು ದಶಕಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳಾದ ಸೂಪರ್‌ಸ್ಟಾರ್ ರಜನೀಕಾಂತ್ ಮತ್ತು ಉಳಗನಾಯಗನ್ ಕಮಲ್ ಹಾಸನ್ ಬೆಳ್ಳಿ ಪರದೆಯ ಮೇಲೆ ಒಂದಾಗುತ್ತಿದ್ದಾರೆ. ಈ ಬೃಹತ್ ಚಿತ್ರಕ್ಕೆ 'KH x RK' ಎಂದು ತಾತ್ಕಾಲಿಕವಾಗಿ ಹೆಸರಿಸಲಾಗಿದ್ದು, ಶನಿವಾರ ಬಿಡುಗಡೆಯಾದ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.