ಮುಂಬೈ: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ(Abhishek Sharma) , ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅಸಾಧ್ಯವೆನ್ನಬಹುದಾದ ವಿಶ್ವ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಕಿವೀಸ್ ನೀಡಿದ 154 ರನ್‌ಗಳ ಗುರಿಯನ್ನು ಬೆನ್ನಟ್ಟುವಾಗ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ಒಟ್ಟಾರೆಯಾಗಿ 20 ಎಸೆತಗಳಲ್ಲಿ 68 ರನ್‌ಗಳ ಸ್ಫೋಟಕ ಇನಿಂಗ್ಸ್ ಆಡಿದ್ದಾರೆ.