ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನವು ಅಂತಿಮ ಹಂತದಲ್ಲಿ ತಾಂತ್ರಿಕ ತೊಂದರೆಗಳನ್ನು ಎದುರಿಸಿತು. ಹೀಗಾಗಿ, ತುರ್ತು ಭೂಸ್ಪರ್ಶ ಮಾಡಲು ಪ್ರಯತ್ನಿಸುತ್ತಿದ್ದಂತೆ ತಾಂತ್ರಿಕ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿತು. ಇದರ ಪರಿಣಾಮವಾಗಿ ವಿಮಾನ ರನ್‌ವೇಯಲ್ಲಿ ಅಪಘಾತ ಸಂಭವಿಸಿತು ಎಂದು ಹೇಳಲಾಗಿದೆ. ಆದರೆ, ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಅಧಿಕಾರಿಗಳು ಇನ್ನೂ ವಿವರವಾದ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ಸದ್ಯ, ಘಟನಾ ಸ್ಥಳದಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದು, ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬರಲಿದೆ.