ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಕೊಳಿ ಘೋಷ್ ದಸ್ತಿದಾರ್, ಆಡಳಿತ ಎಂಬುದು ಎಲ್ಲರಿಗೂ ಸೇರಿದ್ದು ಎಂದು ಹೇಳುವ ಮೂಲಕ ತಾವೂ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆಯೇ ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ. ಆದರೆ ಅವರು ಈ ಬಗ್ಗೆ ನೇರ ಪ್ರತಿಕ್ರಿಯೆ ನೀಡಿಲ್ಲ. ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾದ ಬಳಿಕ ಆಡಳಿತಾತ್ಮಕ ಸಭೆಗಳಿಗೆ ವಿರೋಧ ಪಕ್ಷದ ಸಂಸದರು ಮತ್ತು ಶಾಸಕರನ್ನು ಆಹ್ವಾನಿಸುವ ನಿರ್ಧಾರ ಕೈಗೊಂಡಿದ್ದು, ಅದರಂತೆ ಟಿಎಂಸಿ ಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪರಾಭವಗೊಂಡ ಬಳಿಕ, ಕಾಕೊಳಿ ಘೋಷ್ ದಸ್ತಿದಾರ್ರನ್ನು ಲೋಕಸಭೆಯ ಚೀಫ್ ವ್ಹಿಪ್ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ತದನಂತರ ಅವರು ಬಾರಾಸತ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರು ಶೀಘ್ರದಲ್ಲೇ ಕಮಲ ಮುಡಿಯಲಿದ್ದಾರೆ ಎಂಬ ಚರ್ಚೆ ಜೋರಾಗಿದೆ(ಏಜೆನ್ಸೀಸ್).