ಕೊನೆಗೆ ಪೆಮಾ ಅವರು ಯುಕೆಯಲ್ಲಿರುವ ತಮ್ಮ ಸ್ನೇಹಿತರೊಬ್ಬರ ಮೂಲಕ ಶಾಂಘೈನಲ್ಲಿರುವ ಭಾರತೀಯ ದೂತಾವಾಸ ಕಚೇರಿಯನ್ನು ತಲುಪುವಲ್ಲಿ ಯಶಸ್ವಿಯಾದರು. ನಂತರ ಭಾರತೀಯ ಅಧಿಕಾರಿಗಳು ಮಧ್ಯಪ್ರವೇಶಿಸಿ, ಪೆಮಾ ಅವರಿಗೆ ಜಪಾನ್ಗೆ ಹೋಗಲು ಅನುವು ಮಾಡಿದರು. ತಮ್ಮ ಕಹಿ ಅನುಭವದ ಕುರಿತು ಪೆಮಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ನನ್ನನ್ನು ಚೀನಿ ಅಧಿಕಾರಿಗಳು ನಡೆಸಿಕೊಂಡ ರೀತಿ ಭಾರತದ ಸಾರ್ವಭೌಮತ್ವ ಮತ್ತು ಅರುಣಾಚಲ ಪ್ರದೇಶದ ನಾಗರಿಕರಿಗೆ ಮಾಡಿದ ನೇರ ಅವಮಾನ ಎಂದಿದ್ದಾರೆ. ಅಲ್ಲದೆ, ಈ ವಿಷಯವನ್ನು ಚೀನಾದ ಮುಂದೆ ಪ್ರಸ್ತಾಪಿಸಿ, ತನ್ನನ್ನು ಕೆಟ್ಟದಾಗಿ ನಡೆಸಿಕೊಂಡ ವಲಸೆ ಮತ್ತು ವಿಮಾನಯಾನ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮತ್ತು ಪರಿಹಾರಕ್ಕಾಗಿ ಒತ್ತಾಯಿಸುವಂತೆ ಭಾರತ ಸರ್ಕಾರವನ್ನು ಪೆಮಾ ಅವರು ಕೇಳಿಕೊಂಡಿದ್ದಾರೆ, (ಏಜೆನ್ಸೀಸ್).