ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಆಯೋಗವು ಈ ರಾಜ್ಯಗಳಿಗೆ ಭೇಟಿ ನೀಡಿತು. ಈ ವೇಳೆ ಆಯೋಗವು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿ ಅವರ ಸಲಹೆಗಳನ್ನು ಸ್ವೀಕರಿಸಿತು. ಜಿಲ್ಲಾ ಚುನಾವಣಾ ಅಧಿಕಾರಿಗಳು, ಎಸ್‌ಪಿಗಳು, ಐಜಿಗಳು, ಡಿಐಜಿಗಳು ಮತ್ತು ಎಲ್ಲಾ ಜಾರಿ ಸಂಸ್ಥೆಗಳ ನೋಡಲ್ ಅಧಿಕಾರಿಗಳನ್ನು ಸಹ ಭೇಟಿ ಮಾಡಿತು. ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿಪಿಗಳೊಂದಿಗೆ ಸಭೆಗಳನ್ನು ನಡೆಸಿತು ಎಂದು ತಿಳಿಸಿದರು.