ನಿವೃತ್ತ ಶಾಲಾ ಶಿಕ್ಷಕ ಗಣಪತಿ ಚಕ್ರವರ್ತಿ (65), ಅವರ ಪತ್ನಿ ಪ್ರೀತಿಲತಾ ಚಕ್ರವರ್ತಿ (50), ಪುತ್ರಿ ಅಗಮಿ ಚಕ್ರವರ್ತಿ ಪ್ರಾರ್ಥಿ (23) ಮತ್ತು 12 ವರ್ಷದ ಪುತ್ರ ಪ್ರಿಯಮ್ ಚಕ್ರವರ್ತಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುರುವಾರ ರಾತ್ರಿಯಿಂದಲೇ ಈ ಕುಟುಂಬದ ಎಲ್ಲಾ ಸದಸ್ಯರ ಮೊಬೈಲ್ ಫೋನ್ಗಳು ನಿರಂತರವಾಗಿ ಸ್ವಿಚ್ಆಫ್ ಆಗಿದ್ದವು. ಇದರಿಂದ ಅನುಮಾನಗೊಂಡ ಸಂಬಂಧಿಕರು ಶನಿವಾರ ರಾತ್ರಿ ಅವರ ಮನೆಗೆ ನೇರವಾಗಿ ಬಂದಿದ್ದಾರೆ. ಆದರೆ, ಮನೆಯ ಮುಖ್ಯ ಬಾಗಿಲಿಗೆ ಹೊರಗಿನಿಂದ ಬೀಗ ಹಾಕಿದ್ದು, ಒಳಗೆ ಲೈಟ್ಸ್ ಆಫ್ ಆಗಿತ್ತು. ಕೂಡಲೇ ಸಂಬಂಧಿಕರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.