ಎಲ್ಲ ಎಂಟು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (UAPA), 1967ರ ಸೆಕ್ಷನ್ 13, 17, 18, 38 ಮತ್ತು 39ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಭಾರತೀಯ ನ್ಯಾಯ ಸಂಹಿತೆ (BNS), 2023ರ ಸೆಕ್ಷನ್ 148 ಮತ್ತು 61ರ ಅಡಿಯಲ್ಲೂ ಆರೋಪ ಹೊರಿಸಲಾಗಿದೆ.