ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ, ಸುಪ್ರೀಂಕೋರ್ಟ್ನ ತೀರ್ಪು ಸತ್ಯಮೇವ ಜಯತೇ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ್ದು, ಮೇಲ್ನೋಟಕ್ಕೆ ಆರೋಪಗಳು ನಿಜ ಎಂಬುದನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಅಫ್ಜಲ್ನಿಂದ ಉಮರ್ ಮತ್ತು ಶಾರ್ಜೀಲ್ವರೆಗಿನ ತುಕ್ಡೆ-ತುಕ್ಡೆ ಗ್ಯಾಂಗ್ಗೆ ಬೆಂಬಲ ನೀಡಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.