ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಕುರಿತು ಭಾರಿ ವಿವಾದ ಭುಗಿಲೆದ್ದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷ, ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆಯೂ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಿಕೊಂಡಿದೆ ಎಂದಿರುವ ಪಕ್ಷದ ನಾಯಕರು, ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಹೇಳಿದೆ.