ಮುರ್ಷಿದಾಬಾದ್ನಲ್ಲಿ ಬಾಬರಿ ಮಸೀದಿ ಮಾದರಿಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವ ಕಬೀರ್ ನಿರ್ಧಾರದ ಬಳಿಕ ಜಿಲ್ಲೆಗೆ ದೊಡ್ಡ ಜನಸಮೂಹ ಆಗಮಿಸಲು ಪ್ರಾರಂಭಿಸಿದ್ದು, ಈ ಕಾರ್ಯಕ್ರಮದಲ್ಲಿ ಮೂರು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ಗಮನಿಸಿ, ಮುರ್ಷಿದಾಬಾದ್ನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 12 ರ ಎರಡೂ ಬದಿಗಳಲ್ಲಿ ಆರ್ಎಎಫ್, ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ