ಇನ್ನು 2025, ಡಿಸೆಂಬರ್ 12 ರಂದು ಆ ಮಹಿಳೆ ಮತ್ತೆ ಪೊಲೀಸ್ ಠಾಣೆಗೆ ಬಂದು, ತನ್ನ ಪ್ರೀತಿಯನ್ನು ಹೇಳಿಕೊಂಡಿದ್ದಾಳೆ. ಅಲ್ಲದೆ, ಇನ್ಸ್‌ಪೆಕ್ಟರ್ ಉತ್ತರ ತಿಳಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು. ಒಂದು ವೇಳೆ ಪ್ರೀತಿಯನ್ನು ನಿರಾಕರಿಸಿದರೆ ಸತೀಶ್ ಅವರ ಖ್ಯಾತಿಗೆ ಹಾನಿ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಳು ಎಂದು ಆರೋಪಿಸಲಾಗಿದೆ. ಮಹಿಳೆಯ ನಿರಂತರ ಕಿರುಕುಳದಿಂದ ಬೇಸತ್ತ ಇನ್ಸ್‌ಪೆಕ್ಟರ್ ಸತೀಶ್ ಔಪಚಾರಿಕ ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ, ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಕ್ರಿಮಿನಲ್ ಬೆದರಿಕೆ ಮತ್ತು ಆತ್ಮಹತ್ಯಾ ಬೆದರಿಕೆಗಳಿಗೆ ಸಂಬಂಧಿಸಿದ ಆರೋಪಗಳ ಅಡಿಯಲ್ಲಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ, (ಏಜೆನ್ಸೀಸ್).