ಬಿಡದಿ ಟೌನ್ಶಿಪ್ ಯೋಜನೆ ಕುರಿತು ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಚರ್ಚೆಗೆ ಬರುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿಗೆ ಪತ್ರ ಬರೆದು ಆಹ್ವಾನ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಈ ವಿಷಯವು ತಮ್ಮೊಬ್ಬರ ಸಮಸ್ಯೆಯಲ್ಲ, ಸಾವಿರಾರು ರೈತರ ಬದುಕಿಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ನಾಲ್ಕು ಗೋಡೆಗಳ ನಡುವೆ ಸಭೆ ನಡೆಸುವುದಕ್ಕಿಂತ, ನೊಂದ ರೈತರ ನಡುವೆ ತೆರಳಿ ಚರ್ಚೆ ನಡೆಸುವುದು ಸೂಕ್ತ ಎಂದಿದ್ದಾರೆ.