ಅಂಚೆ ಮತಎಣಿಕೆಯಲ್ಲಿ ಎನ್ಡಿಎ ಮುನ್ನಡೆಯನ್ನು ಸಾಧಿಸಿದೆ. ಅಲ್ಲದೆ, ಮತಯಂತ್ರ ಎಣಿಕೆಯಲ್ಲಿ ಬೆಳಗ್ಗೆ 8.30ರ ಹೊತ್ತಿಗೆ ಎನ್ಡಿಎ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾಘಟ್ಬಂಧನ್ 43 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಕೇವಲ 3 ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಮತಎಣಿಕೆಯ ಟ್ರೆಂಡ್ ಕ್ಷಣ ಕ್ಷಣಕ್ಕೂ ಬದಲಾಗುತ್ತಿದ್ದು, ಎನ್‌ಡಿಎಗೆ ಮಹಾಘಟ್ಬಂಧನ್ ಪ್ರಬಲ ಪೈಪೋಟಿ ನೀಡುತ್ತಿದೆ.