ಪರಿಷತ್ತಿನ 7ನೇ ಸ್ಥಾನಕ್ಕೆ ಕಾಂಗ್ರೆಸ್ ವಿನಯ್ ಕಾರ್ತಿಕ್ ಅವರನ್ನು ಕಣಕ್ಕಿಳಿಸಿದ್ದು, ಮೈತ್ರಿಕೂಟದ ಮತಗಳನ್ನು ಸೆಳೆಯಲು ಪ್ಲಾನ್ ಮಾಡಿದೆ. ಆದರೆ, ಇದಕ್ಕೆ ಕೌಂಟರ್ ಕೊಡಲು ಮುಂದಾಗಿರುವ ಜೆಡಿಎಸ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಶಾಸಕ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಭಾನುವಾರ ತುರ್ತು ಸಭೆ ನಡೆಸಿದೆ. ಮೈತ್ರಿ ಮತಗಳು ಚದುರದಂತೆ ಕಾಪಾಡಿಕೊಳ್ಳಲು ಹಾಲಿ ಪರಿಷತ್ ಸದಸ್ಯ ಗೋವಿಂದರಾಜು ಅವರಿಗೆ ನಾಮಪತ್ರ ಸಲ್ಲಿಸಲು ಸೂಚಿಸಿದ್ದು, 7ನೇ ಸ್ಥಾನವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಜೆಡಿಎಸ್ ರಣತಂತ್ರ ಹೂಡಿದೆ.