ಕಾನೂನು ಸುವ್ಯವಸ್ಥೆ ಹಳಿತಪ್ಪಿರುವುದಕ್ಕೆ ಜೀವಂತ ಸಾಕ್ಷಿಯಾಗಿರುವ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ರಾಜ್ಯವು ಅತ್ಯಂತ ಧ್ರುವೀಕೃತ ಪರಿಸ್ಥಿತಿಯಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಅಧಿಕಾರಿಗಳ ರಕ್ಷಣೆಯ ವಿಷಯದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತು ಎನ್‌ಐಎ ಸಂಸ್ಥೆಗಳಿಗೆ ವಹಿಸಲು ಆದೇಶಿಸಿದೆ.