ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಲ್ ಭಾಗವಹಿಸಿದ್ದರು. ಅಲ್ಲದೆ, ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷ ಗೌರವ್ ಗೊಗೊಯ್ ಉಪಸ್ಥಿತರಿದ್ದರು. 2026 ರ ವಿಧಾನಸಭಾ ಚುನಾವಣೆಗೆ ಚುನಾವಣಾ ಮಾರ್ಗಸೂಚಿಯನ್ನು ಅಂತಿಮಗೊಳಿಸಲು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಸಹ ಹಾಜರಿದ್ದರು.