ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಗಂಗಾವತಿ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಸಮಿತಿ ಸಂಚಾಲಕ ಶರಣು ಪಾಟೀಲ್, ಪದಾಧಿಕಾರಿಗಳಾದ ಆಂಜನೇಯ ರಾಂಪುರ, ಬಸವರಾಜು, ರವಿಕುಮಾರ, ವೆಂಕಣ್ಣ, ಅಖಿಲಕುಮಾರ, ಶ್ರೀನಿವಾಸ, ಜ್ಯೋತಿ, ಸಂಜನಾ ಇತರರಿದ್ದರು.
Published on:
Copied
Follow Us
ಗಂಗಾವತಿ: ವಿವಿಧ ಇಲಾಖೆಗಳ ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ನಿರುದ್ಯೋಗಿಗಳೊಂದಿಗೆ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡ ಗೌಡರ್ಗೆ ಮನವಿ ಸಲ್ಲಿಸಿದರು.
ಸಮಿತಿ ಸಂಚಾಲಕ ಶರಣು ಪಾಟೀಲ್ ಮಾತನಾಡಿ, 56 ಸಾವಿರ ಹುದ್ದೆಗಳು ಖಾಲಿಯಿರುವ ಬಗ್ಗೆ ಸರ್ಕಾರ ವರದಿ ನೀಡಿದ್ದು, ಭರ್ತಿಗೂ ಭರವಸೆ ನೀಡಿತ್ತು. ರಾಜ್ಯ ಮತ್ತು ಕೇಂದ್ರದ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕಾಯಂ ಹಾಗೂ ಪಾರದರ್ಶಕ ನೇಮಕಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಪರಿಣಾಮ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಈವರೆಗೆ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸದೆ ನಿರ್ಲಕ್ಷೃ ವಹಿಸಿದೆ. ಕೂಡಲೇ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೆಪಿಎಸ್ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದ ಬಗ್ಗೆ ವರದಿಯಾಗಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.