ಇಂದಿನಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್: ಸಂಜೆ 4 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ | D K Shivakumar

ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
Published on
ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್(D K Shivakumar) ಅವರ ದರ್ಬಾರ್ ಆರಂಭವಾಗಲಿದ್ದು, ಬುಧವಾರ(ಜೂ. 03) ಸಂಜೆ 4.05 ಗಂಟೆಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ದಶಕಗಳ ಅವಧಿಯ ಸಂಘಟನಾತ್ಮಕ ಹೋರಾಟದ ಅನುಭವವಿರುವ, ಪಕ್ಷನಿಷ್ಠೆಯ ಹೆಗ್ಗಳಿಕೆ ಹೊಂದಿರುವ ಡಿ.ಕೆ.ಶಿವಕುಮಾರ್ ದಿಲ್ಲಿಯಲ್ಲಿ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಡೆದ ಸುದೀರ್ಘ ಸಮಾಲೋಚನೆಗಳ ನಂತರ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಲೋಕಭವನ ಗಾಜಿನ ಹೌಸ್​ನಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಜ್ಯಪಾಲರು ನೂತನ ಮುಖ್ಯಮಂತಿಗೆ ಪದವಿ ಹಾಗೂ ಗೌಪ್ಯತಾ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಜೊತೆಗೆ 14 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರ ರಾಜಕಾರಣದ ದಿಗ್ಗಜರು, ವಿವಿಧ ರಾಜ್ಯಗಳ ಮುಖಂಡರು ಹಾಗೂ ನಾಡಿನ ಸಾಂಸ್ಕೃತಿಕ, ಸಾಮಾಜಿಕ ವಲಯದ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
ಪ್ರಮುಖವಾಗಿ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ವಾದ್ರಾ, ಕೆ.ಸಿ.ವೇಣುಗೋಪಾಲ್, ರಿ ರಣದೀಪ್ ಸಿಂಗ್ ಸುರ್ಜೆವಾಲ, ಕಾಂಗ್ರೆಸ್ ಸಿಎಂಗಳಾದ ವಿ.ಡಿ.ಸತೀಶನ್, ರೇವಂತ ರೆಡ್ಡಿ, ಸುಖವೀಂದರ್ ಸಿಂಗ್ ಸುಖು ಸೇರಿದಂತೆ ಎಐಸಿಸಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಇನ್ನೂ ಬೆಳಗ್ಗೆ ದೇವಸ್ಥಾನಕ್ಕೆ ಭೇಟಿನೀಡಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಪ್ರಮಾಣವಚನ ಕಾರ್ಯಗಳು ನಡೆಯಲಿವೆ. ಸಂಜೆ 4.05 ನಿಮಿಷಕ್ಕೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ಸಭೆಯಲ್ಲಿ ಐದು ಪ್ರಮುಖ ಘೋಷಣೆಗಳನ್ನು ಘೋಷಿಸುವ ಸಾಧ್ಯತೆಯಿದ್ದು ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮಹತ್ವದ ಘೋಷಣೆ ನಿರೀಕ್ಷೆ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ.ಶಿವಕುಮಾರ್ ತಮ್ಮ ನೇತೃತ್ವದಲ್ಲಿ ನಡೆಯುವ ಪ್ರಥಮ ಸಚಿವ ಸಂಪುಟ ಸಭೆಯಲ್ಲಿ ಮೂರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ. ಶಿಕ್ಷಣ, ನೀರಾವರಿ ಕ್ಷೇತ್ರ ಹಾಗೂ ಬೆಂಗಳೂರಿಗೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net