ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಕಲಬುರಗಿ, ಬೆಳಗಾವಿ ಹಾಗೂ ಗುಜರಾತ್ನ ಅಹಮದಾಬಾದ್ ಸೇರಿದಂತೆ ಒಟ್ಟು 21 ವಿವಿಧ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ. ಸ್ವತಃ ಕೆಪಿಎಸ್ಸಿ ಕಚೇರಿ, ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಶಾಂತಾ ಹೊಸಮನಿ, ಹಗರಣದ ಮಧ್ಯವರ್ತಿಗಳು ಮತ್ತು ಡಿಜಿಟಲ್ ಮೌಲ್ಯಮಾಪನ ಸಂಸ್ಥೆಯಾದ ‘M/s ಎಡುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್’ ಕಚೇರಿ ಹಾಗೂ ಆಯ್ಕೆಯಾದ ಕೆಲ ಅಭ್ಯರ್ಥಿಗಳ ಮನೆಗಳ ಮೇಲೆ ಸಿಆರ್ಪಿಎಫ್ ಭದ್ರತೆಯೊಂದಿಗೆ ಇಡಿ ಅಧಿಕಾರಿಗಳು ಮುಗಿಬಿದ್ದಿದ್ದಾರೆ.