ಪಡಿತರ ದಂಧೆಕೋರರ ಪಟ್ಟಿ ಸಿದ್ಧಪಡಿಸಿದ ಆಹಾರ ಇಲಾಖೆ: ವ್ಯಕ್ತಿಗಳು, ಸಂಸ್ಥೆಗಳು, ರೈಸ್‌ಮಿಲ್ ಮಾಲೀಕರು ಭಾಗಿ-list of ration smugglers

ಆಹಾರ ಇಲಾಖೆ
ಆಹಾರ ಇಲಾಖೆ
Published on
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿರುವವರ ವ್ಯಕ್ತಿಗಳು, ಸಂಸ್ಥೆಗಳ ಮತ್ತು ರೈಸ್‌ಮಿಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರಿಗೆ ಪತ್ರ ಬರೆದು ಸೂಚಿಸಿದ್ದಾರೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಉತ್ತರ ಕನ್ನಡ, ಉಡುಪಿ, ಬ್ರಹ್ಮಾವರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ವಿಜಯನಗರ, ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ಖಾಸಗಿ ವ್ಯಕ್ತಿಗಳು, ಸಂಸ್ಥೆಗಳ, ರೈಸ್‌ಮಿಲ್ ಹೆಸರು ಮತ್ತು ವಿಳಾಸ ಸಮೇತ ಸಿದ್ಧಪಡಿಸಿರುವ ಪಟ್ಟಿಯನ್ನು ಆಯುಕ್ತರಿಗೆ ಕಳುಹಿಸಿರುವ ಕಾರ್ಯದರ್ಶಿ, ಕೂಡಲೇ ಮೇಲಿನ ದಂಧೆಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ತಾಕೀತು ಮಾಡಿದ್ದಾರೆ.
ಪಡಿತರ ಅಕ್ಕಿ ಕಾಳಸಂತೆಗೆ ಮಾರಾಟವಾಗುತ್ತಿರುವುದನ್ನು ತಡೆಯಲು ಜಿಲ್ಲಾಡಳಿತ, ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ನಮಗೆ ಸೂಚನೆ ಬಂದಿದೆ. ಬ್ರಹ್ಮಾವರ ತಾಲೂಕು ಸೇರಿ ಇತರ ಭಾಗಗಳಲ್ಲಿ ಪಡಿತರ ಅಕ್ಕಿ ಸಾಗಾಣೆ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಕಾರ್ಯದರ್ಶಿ ಉಲ್ಲೇಖಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಡ್‌ದಾರರಿಗೆ ವಿತರಿಸಲಾಗುವ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬೃಹತ್ ಜಾಲ ರಾಜ್ಯದಲ್ಲಿದೆ. ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಬಂದ ದೂರುಗಳು ಮತ್ತು ಮನವಿ ಆಧರಿಸಿ ಪಟ್ಟಿ ಸಿದ್ಧಪಡಿಸಲಾಗಿದೆ.ಅಕ್ರಮ ಜಾಲದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಹಾಗೂ ರೈಸ್ ಮಿಲ್‌ಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳುವಂತೆ ಕಾರ್ಯದರ್ಶಿ, ಆಯುಕ್ತರಿಗೆ ಆದೇಶಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net