ಮತ್ತೊಂದೆಡೆ, ಮಾಜಿ ಸಚಿವ ಡಾ. ಸಿ. ವಿಜಯಭಾಸ್ಕರ್ ಕಳೆದ ವಾರ ತಮ್ಮ ಬೆಂಬಲಿಗರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ಸದ್ಯದಲ್ಲೇ ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಮತ್ತೊಬ್ಬ ಪ್ರಭಾವಿ ನಾಯಕ ಸಿ.ವಿ. ಷಣ್ಮುಗಂ ಅವರು ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಅವರೊಂದಿಗೆ ಅಂತರ ಕಾಯ್ದುಕೊಂಡಿದ್ದು, ಅವರ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ. ಎಸ್‌ಪಿ ವೇಲುಮಣಿ ಸೇರಿದಂತೆ ಕೆಲವು ರೆಬೆಲ್ ಶಾಸಕರು ಪಳನಿಸ್ವಾಮಿ ನಾಯಕತ್ವವನ್ನು ಒಪ್ಪಿಕೊಂಡಿದ್ದರೂ, ಪಕ್ಷದೊಳಗಿನ ಅಸಮಾಧಾನ ಮಾತ್ರ ಇನ್ನೂ ತಣ್ಣಗಾಗಿಲ್ಲ.