ನೀಟ್ ಅಭ್ಯರ್ಥಿಗಳಿಗೆ ಫ್ರೀಬಸ್ ಪ್ರಯಾಣ; ಸಚಿವ ರಾಮಲಿಂಗಾರೆಡ್ಡಿ ಘೋಷಣೆ: ವಿಜಯವಾಣಿ ಎಜುಕೇಷನ್ ಎಕ್ಸ್​ಪೋಗೆ ಚಾಲನೆ

ವಿಜಯವಾಣಿ ವಿದ್ಯೋತ್ಸವ ಎಜುಕೇಷನ್ ಎಕ್ಸ್​ಪೋಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ, ನ್ಯಾಷನಲ್ ಕಾಲೇಜು ಆಫ್ ಎಜುಕೇಷನ್ ಸೊಸೈಟಿಯ ಕರ್ನಾಟಕದ ಅಧ್ಯಕ್ಷ ವಿ.ವೆಂಕಟಶಿವಾರೆಡ್ಡಿ ಮತ್ತಿತರರಿದ್ದರು.
ವಿಜಯವಾಣಿ ವಿದ್ಯೋತ್ಸವ ಎಜುಕೇಷನ್ ಎಕ್ಸ್​ಪೋಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ, ನ್ಯಾಷನಲ್ ಕಾಲೇಜು ಆಫ್ ಎಜುಕೇಷನ್ ಸೊಸೈಟಿಯ ಕರ್ನಾಟಕದ ಅಧ್ಯಕ್ಷ ವಿ.ವೆಂಕಟಶಿವಾರೆಡ್ಡಿ ಮತ್ತಿತರರಿದ್ದರು.
Published on
ಬೆಂಗಳೂರು: ರಾಜ್ಯದಲ್ಲಿ ಜೂ.21ರಂದು ನಡೆಯಲಿರುವ ನೀಟ್-ಯುಜಿ ಮರು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಅಂದು ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸ ಬಹುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ, ಜಯನಗರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 2 ದಿನಗಳ ‘ವಿದ್ಯೋತ್ಸವ ಎಜುಕೇಷನ್ ಎಕ್ಸ್​ಪೋ’ಗೆ
ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ನೀಟ್-ಯುಜಿ ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಯಾಗದಂತೆ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡಲಾಗುತ್ತಿದೆ. ಸಿಇಟಿ ಸಮಯದಲ್ಲೂ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್​ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎಂದರು.
ಪತ್ರಿಕಾ ರಂಗದಲ್ಲಿ ವಿಜಯವಾಣಿ ಮೊದಲ ಸ್ಥಾನದಲ್ಲಿದೆ. ಅದೇರೀತಿ, ಸಾರಿಗೆ ಕ್ಷೇತ್ರದಲ್ಲೂ ವಿಆರ್​ಎಲ್ ಸಮೂಹ ಸಂಸ್ಥೆಗಳು ನಂ.1 ಸ್ಥಾನದಲ್ಲಿದ್ದು, ದೇಶಾದ್ಯಂತ ಆ ಸಂಸ್ಥೆಯು ಸಾರಿಗೆ ಜಾಲ ಹೊಂದಿದೆ. ಇದರಲ್ಲಿ ಡಾ.ವಿಜಯ ಸಂಕೇಶ್ವರ ಅವರ ಶ್ರಮ ಅಪಾರವಾದದ್ದೆಂದು ಸಚಿವರು ಶ್ಲಾಘಿಸಿದರು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ವಿಜಯವಾಣಿ ಪತ್ರಿಕೆ ಎಜುಕೇಷನ್ ಎಕ್ಸ್​ಪೋ ಆಯೋಜಿಸಿದೆ. ಶೇ.90 ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಒಂದೇ ಸೂರಿನಡಿ ಸೇರಿವೆ. ಕೋರ್ಸ್, ಕಾಲೇಜು ಮತ್ತು ಶುಲ್ಕದ ಬಗ್ಗೆ ಉಪಯುಕ್ತ ಮಾಹಿತಿ ಸಿಗಲಿದೆ. ಇದನ್ನು ವಿದ್ಯಾರ್ಥಿಗಳು, ಪಾಲಕರು ಸದ್ಬಳಕೆ ಮಾಡಿಕೊಳ್ಳುವಂತಾಗಬೇಕೆಂದು ಸಚಿವರು ಸಲಹೆ ನೀಡಿದರು. ಇದಕ್ಕೂ ಮುನ್ನ ಸಚಿವರು ಎಕ್ಸ್​ಪೋದಲ್ಲಿ ಪ್ರತಿಷ್ಠಾಪಿಸಿರುವ ಶಿಕ್ಷಣ ಸಂಸ್ಥೆಗಳ ಪ್ರಾತ್ಯಕ್ಷಿಕೆ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್ ಸೊಸೈಟಿಯ (ಎನ್​ಇಎಸ್) ಕರ್ನಾಟಕದ ಅಧ್ಯಕ್ಷ ವಿ. ವೆಂಕಟಶಿವಾರೆಡ್ಡಿ ಸೇರಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net