ಬ್ಯಾಂಕ್ ಮ್ಯಾನೇಜ್‌ಮೆಂಟ್ ಹಾಗೂ ಸಿಬ್ಬಂದಿ ಒಟ್ಟುಗೂಡಿ ಆಭರಣಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯು ಪೊಲೀಸ್ ದೂರು ದಾಖಲಿಸಿದ್ದು, ಶಾಖಾ ವ್ಯವಸ್ಥಾಪಕ ಹಾಗೂ ಸಂಬಂಧಿತ ಸಿಬ್ಬಂದಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ಈ ಕುರಿತು ಮಾತನಾಡಿರುವ ಕಾನ್ಪುರದ ಪೊಲೀಸ್ ಉಪ ಆಯುಕ್ತ (DCP) ಅತುಲ್ ಶ್ರೀವಾಸ್ತವ ಅವರು, ಪ್ರಕರಣ ದಾಖಲಿಸಿಕೊಂಡು ಸಂಬಂಧಿತ ಬ್ಯಾಂಕ್ ಉದ್ಯೋಗಿಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಸಿಸಿಟಿವಿ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೊಲೀಸರು ಲಾಕರ್ ದಾಖಲೆಗಳು, ಬ್ಯಾಂಕ್ ದಾಖಲೆಗಳು ಮತ್ತು ಉದ್ಯೋಗಿಗಳ ಪಾತ್ರದ ಕುರಿತು ತನಿಖೆ ಮುಂದುವರಿಸಿದ್ದಾರೆ, (ಏಜೆನ್ಸೀಸ್).