ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, ತಮಿಳುನಾಡು ತನ್ನ ಭಾಷೆಯನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತದೆ ಎಂದು ಬಣ್ಣಿಸಿದ್ದಾರೆ. ತನ್ನ ಭಾಷೆಯನ್ನು ಉಸಿರಿಗಿಂತ ಹೆಚ್ಚಾಗಿ ಪ್ರೀತಿಸುವ ಈ ರಾಜ್ಯವು, ಹಿಂದಿ ಹೇರಿಕೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಿದೆ. ಪ್ರತಿ ಬಾರಿ ಹಿಂದಿಯನ್ನು ಬಲವಂತವಾಗಿ ಹೇರಲು ಪ್ರಯತ್ನಿಸಿದಾಗಲೂ ಅಷ್ಟೇ ತೀವ್ರತೆಯಿಂದ ನಾವು ಪ್ರತಿಭಟಿಸಿದ್ದೇವೆ ಎಂದು ಹೇಳಿದ್ದಾರೆ.