ಮಾರ್ಕಾಪುರಂ ಡಿಎಸ್‌ಪಿ ನಾಗರಾಜು ಅವರು ನೀಡಿರುವ ಮಾಹಿತಿ ಪ್ರಕಾರ, ಈವರೆಗೆ ಎಂಟು ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಸುಮಾರು 18 ರಿಂದ 20 ಪ್ರಯಾಣಿಕರನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.