ನವದೆಹಲಿ: ಟಿ20 ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ನಡೆಸಿದ ಭಾರತದ ಆರಂಭಿಕ ಆಟಗಾರ ಇಶಾನ್ ಕಿಶನ್, ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಬ್ಯಾಟಿಂಗ್(ICC T20 Rankings) ಶ್ರೇಯಾಂಕದಲ್ಲಿ ಭಾರೀ ಏರಿಕೆ ಕಂಡಿದ್ದಾರೆ. ಪಾಕಿಸ್ತಾನ ವಿರುದ್ಧ ಕೇವಲ 40 ಎಸೆತಗಳಲ್ಲಿ 77 ರನ್ ಚಚ್ಚಿದ ಕಿಶನ್, ಈಗ ವಿಶ್ವದ ಎಂಟನೇ ಶ್ರೇಯಾಂಕದ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.