ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಪರೀಕ್ಷಾ ಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಈಗಾಗಲೇ ತೆಗೆದುಕೊಂಡಿರುವ ಬಿಗಿ ಕ್ರಮಗಳನ್ನು ನೆನಪಿಸಿಕೊಂಡರು. ಈ ಅಕ್ರಮಗಳನ್ನು ತಡೆಯಲು ಈಗಾಗಲೇ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ ಅವರು, ಸೋಮವಾರ ಸಂಸತ್ತಿನಲ್ಲಿ ಕಠಿಣ ಕಾನೂನು ನಿಯಮಗಳನ್ನು ಒಳಗೊಂಡ ಹೊಸ ವಿಧೇಯಕವನ್ನು ಮಂಡಿಸಲಾಗುವುದು ಎಂದು ತಿಳಿಸಿದರು.