Vladimir Putin: ರಷ್ಯಾದೊಂದಿಗೆ ಸಂಬಂಧಗಳನ್ನು ಕಡಿಮೆ ಮಾಡುವಂತೆ ಭಾರತದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೇರ ಸಂದೇಶ ರವಾನಿಸಿದ್ದು, ಸೇಂಟ್ ಪೀಟರ್ಸ್ಬರ್ಗ್ ಅಂತರರಾಷ್ಟಯ ಆರ್ಥಿಕ ವೇದಿಕೆಯಲ್ಲಿ (SPIEF) ಮಾತನಾಡಿದ ಅವರು, ಭಾರತವು ಎಂದಿಗೂ ಯಾವುದೇ ವಿದೇಶಿ ಶಕ್ತಿಯ ಆದೇಶ ಅಥವಾ ದಬ್ಬಾಳಿಕೆಗೆ ತಲೆಬಾಗುವುದಿಲ್ಲ ಮತ್ತು ಸಾರ್ವಭೌಮ ರಾಷ್ಟ್ರವಾಗಿ ತನ್ನ ಸ್ವತಂತ್ರ ನಿರ್ಧಾರಗಳನ್ನು ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸುವುದರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಅವರ ದೃಢ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.