ಈ ಸರಣಿಯಲ್ಲಿ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಕೊಡುವ ಎಲ್ಲ ಸಾಧ್ಯತೆಗಳಿವೆ. ವರದಿಗಳ ಪ್ರಕಾರ, ಇವರಿಬ್ಬರಿಗೂ ರೆಸ್ಟ್ ನೀಡುವ ಮೂಲಕ ಐದು ಪಂದ್ಯಗಳ ಟಿ20 ಸರಣಿಗೆ ಉಪಯೋಗಿಸಿಕೊಳ್ಳಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಮತ್ತೊಂದೆಡೆ, ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡು, ತಂಡ ಸೇರುವ ನಿರೀಕ್ಷೆಯಿದೆ.