ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕದ ಮಾರ್ಕೊ ರೂಬಿಯೋ, ಹೊರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ಎಲ್ಲಾ ವಾಣಿಜ್ಯ ಹಡಗುಗಳು ಅಮೆರಿಕ ಸೇನೆ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಅಮೆರಿಕ ಹೇರಿರುವ ಆರ್ಥಿಕ ದಿಗ್ಬಂಧನವನ್ನು ಉಲ್ಲಂಘಿಸಿ ಇರಾನ್‌ನಿಂದ ಕಾನೂನುಬಾಹಿರವಾಗಿ ತೈಲ ಸಾಗಣೆ ಮಾಡುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಉದ್ಧಟತನದ ಉತ್ತರ ನೀಡಿದ್ದಾರೆ. ಈ ಬೆಳವಣಿಗೆಯು ಭಾರತ ಮತ್ತು ಅಮೆರಿಕ ನಡುವಿನ ರಾಜತಾಂತ್ರಿಕ ಬಾಂಧವ್ಯದಲ್ಲಿ ಭಾರಿ ಬಿರುಕು ಮೂಡಿಸಿದೆ,(ಏಜೆನ್ಸೀಸ್).