ಮಾಸ್ಕೋ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕಪ್ಪಾಗುತ್ತಿರುವ ಬೆನ್ನಲ್ಲೇ, ಜಾಗತಿಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಯೊಂದು ಕಂಡುಬಂದಿದೆ. ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಐತಿಹಾಸಿಕ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡ ಬೆನ್ನಲ್ಲೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Putin Mediation) ಈಗ ಮಧ್ಯಸ್ಥಿಕೆ ವಹಿಸಲು ಮುಂದೆ ಬಂದಿದ್ದಾರೆ.