ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಭಾರತೀಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದ ರಾಣಾ, 1994, 1998, 2002 ಮತ್ತು 2006 ರ ನಾಲ್ಕು ಆವೃತ್ತಿಗಳಲ್ಲಿ ಅದ್ಭುತ ಪ್ರಾಬಲ್ಯ ಸಾಧಿಸಿದ್ದರು. ಭಾರತದ ಪರ ಅವರ ಅತ್ಯಂತ ಸ್ಮರಣೀಯ ಪ್ರದರ್ಶನ ಬಂದಿದ್ದು 2006 ರ ದೋಹಾ ಏಷ್ಯನ್ ಗೇಮ್ಸ್‌ನಲ್ಲಿ. ಅಲ್ಲಿ ಅವರು ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಲ್ಲದೆ, 25 ಮೀಟರ್ ಸೆಂಟರ್ ಫೈರ್ ಪಿಸ್ತೂಲ್ ವಿಭಾಗದಲ್ಲಿ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು. ಇದಕ್ಕೂ ಮುನ್ನ, 1994 ರ ಮಿಲನ್ ವಿಶ್ವ ಚಾಂಪಿಯನ್‌ಶಿಪ್‌ನ ಜೂನಿಯರ್ ವಿಭಾಗದಲ್ಲಿ ಕೇವಲ 18 ನೇ ವಯಸ್ಸಿನಲ್ಲಿ ವಿಶ್ವ ದಾಖಲೆಯ ಸ್ಕೋರ್‌ನೊಂದಿಗೆ ಚಿನ್ನದ ಪದಕ ಗೆದ್ದು ಜಾಗತಿಕ ಮಟ್ಟದಲ್ಲಿ ತಮ್ಮ ಆಗಮನವನ್ನು ಸಾರಿದ್ದರು, (ಏಜೆನ್ಸೀಸ್).