2000 ಜುಲೈ ತಿಂಗಳಲ್ಲಿ ಹರಿಯಾಣದ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದ ಅವರು 2001ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. 2004 ಜನವರಿ 9ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ನಂತರ 2018 ಅಕ್ಟೋಬರ್ನಿಂದ 2019 ಮೇ 24,ರವರೆಗೆ ಸುಪ್ರೀಂ ಕೋರ್ಟ್ಗೆ ಬಡ್ತಿ ಪಡೆಯುವವರೆಗೆ ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. ನವೆಂಬರ್ 2024 ರಿಂದ ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ (ಏಜೆನ್ಸೀಸ್).