ಈ ಬಾರಿಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೈಕಮಾಂಡ್ ಹಿರಿಯರ ಅನುಭವ ಹಾಗೂ ವಿವಿಧ ವಲಯಗಳ ಪ್ರಾತಿನಿಧ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಹಿರಿಯ ಮುತ್ಸದ್ದಿ ಬಿ.ಕೆ. ಹರಿಪ್ರಸಾದ್ ಅವರಿಗೆ ಮತ್ತೊಮ್ಮೆ ಮಣೆ ಹಾಕಲಾಗಿದ್ದರೆ, ಉಳಿದಂತೆ ಪಕ್ಷಕ್ಕಾಗಿ ದುಡಿದ ಇತರ ಮೂವರು ಸಕ್ರಿಯ ನಾಯಕರಿಗೂ ಸೂಕ್ತ ಅವಕಾಶ ಕಲ್ಪಿಸಲಾಗಿದೆ. ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಬಹುತೇಕ ಸುಲಭವಾಗಿದ್ದು, ಶೀಘ್ರದಲ್ಲೇ ಇವರೆಲ್ಲರೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.