ರಾಜಕೀಯ ಸಮೀಕರಣಗಳನ್ನು ಗಮನಿಸಿದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದೆ. ಇದಕ್ಕಾಗಿ ಸಿಪಿಐ(ಎಂ), ಸಿಪಿಐ, ಕೇರಳ ಕಾಂಗ್ರೆಸ್ (ಎಂ), ಆರ್ಜೆಡಿ ಮತ್ತು ಎನ್ಸಿಪಿ (ಶರದ್ ಪವಾರ್) ಸೇರಿದಂತೆ ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇತ್ತ 2011ರ ನಂತರ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಮುಸ್ಲಿಂ ಲೀಗ್ ಮತ್ತು ಆರ್ಎಸ್ಪಿಯಂತಹ ಪಕ್ಷಗಳ ಬಲದೊಂದಿಗೆ ಕಣಕ್ಕಿಳಿದಿದೆ. ಇನ್ನು ಬಿಜೆಪಿ ನೇತೃತ್ವದ ಎನ್ಡಿಎ ಈ ಬಾರಿ ಬಿಡಿಜೆಎಸ್ ಮತ್ತು ಟ್ವೆಂಟಿ20 ಪಕ್ಷದೊಂದಿಗೆ ಕೈಜೋಡಿಸಿ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸಲು ಮುಂದಾಗಿದೆ.