ಮಮತಾ ಬ್ಯಾನರ್ಜಿ ನ್ಯಾಯಾಲಯಕ್ಕೆ ಹಾಜರಾದ ಬೆನ್ನಲ್ಲೇ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್, ಇಂದು ನ್ಯಾಯಾಲಯದಲ್ಲಿ ಅವರ ಖುದ್ದು ಹಾಜರಾತಿಯು ಜನರ ಪರವಾಗಿ ಅವರಿಗಿರುವ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ. ಬಂಗಾಳದ ಜನರಿಗೆ ಅಗತ್ಯವಿರುವ ಸಮಯದಲ್ಲಿ ಅವರು ಎಂದಿಗೂ ಕೈಬಿಡುವುದಿಲ್ಲ. ಸತ್ಯ, ನ್ಯಾಯ ಮತ್ತು ಸಾಂವಿಧಾನಿಕ ಮೌಲ್ಯಗಳಿಗಾಗಿ ಅವರ ಹೋರಾಟ ನಿರಂತರವಾದುದು ಎಂದು ಬರೆದುಕೊಂಡಿದೆ.