ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೀಡಾಗುತ್ತಿದ್ದಂತೆ, ಎಚ್ಚೆತ್ತ ಸೆಜಲ್ ಪವಾರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯ ಪೋಸ್ಟ್ ಮೂಲಕ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ನಾನು ಹೇಳಿದ ಮಾತುಗಳನ್ನು ನಾನು ಯಾವುದೇ ರೀತಿಯಲ್ಲೂ ಸಮರ್ಥಿಸಿಕೊಳ್ಳುವುದಿಲ್ಲ, ಆ ಬೇಜವಾಬ್ದಾರಿಯುತ ಕಾಮೆಂಟ್‌ನ ಸಂಪೂರ್ಣ ಜವಾಬ್ದಾರಿಯನ್ನು ನಾನೇ ಹೊರತ್ತೇನೆ. ಆದರೆ, ನಾನು ಹೇಳಲು ಹೊರಟ ವಿಷಯದ ಅರ್ಥವೇ ಬೇರೆಯಾಗಿತ್ತು, ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.