12 ಜಿಲ್ಲೆಗಳಲ್ಲಿ ಸಾಧಾರಣ ಮಳೆ:ಹವಾಮಾನ ಇಲಾಖೆ ಮುನ್ಸೂಚನೆ-Rain

ಸಾಧಾರಣ ಮಳೆ
ಸಾಧಾರಣ ಮಳೆ
Published on
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ತೇವಾಂಶ ಭರಿತ ಮೋಡಗಳಿರುವ ಕಾರಣ ಬೇಸಿಗೆಯ ಆರಂಭದಲ್ಲೇ ರಾಜ್ಯದ ಕೆಲವೆಡೆ ಭಾನುವಾರ ಮುಂಜಾನೆ ಸಾಧಾರಣ ಮಳೆಯಾಯಿತು.
ಮಂಡ್ಯದ ಕೃಷ್ಣರಾಜಸಾಗರ, ಮೈಸೂರಿನ ನಂಜನಗೂಡು, ಕೊಡಗಿನ ಭಾಗಮಂಡಲ, ಹಾಸನದ ಕೊಣನೂರು ಮತ್ತು ಕೊಡಗಿನ ಪೊನ್ನಂಪೇಟೆಯಲ್ಲಿ ಅಕಾಲಿಕವಾಗಿ ಮಳೆ ಸುರಿಯಿತು.
ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಫೆ.23ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ತೀವ್ರತೆ ಶುರುವಾಗಿದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ವಾಡಿಕೆಗಿಂತ 3ರಿಂದ 5 ಡಿ.ಸೆ.ವರೆಗೆ ಹೆಚ್ಚಾಗಿದೆ. ಕಲಬುರಗಿಯಲ್ಲಿ ಭಾನುವಾರ 36.6 ಡಿ.ಸೆ.ಉಷ್ಣಾಂಶ ದಾಖಲಾಗಿದೆ.
ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಯಂತೆ ಉಷ್ಣಾಂಶ ವರದಿಯಾಗುತ್ತಿದೆ. ಮಾ.15ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿ ಇನ್ನಷ್ಟು ಸುಡು ಬಿಸಿಲು ಕಾಣಿಸಿಕೊಳ್ಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net