ಜುಲೈ 19 ರಂದು ಸೆರೆಹಿಡಿಯಲಾದ ಉಪಗ್ರಹ ಚಿತ್ರಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಮೇಲಿರುವ ಮೋಡಗಳ ಮೇಲ್ಭಾಗದ ತಾಪಮಾನವು ಮೈನಸ್ 80 ಡಿಗ್ರಿ ಸೆಲ್ಸಿಯಸ್ನಷ್ಟು ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ದಾಖಲಾಗಿದೆ. ಇದರೊಂದಿಗೆ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಈಶಾನ್ಯ ಭಾರತದ ರಾಜ್ಯಗಳು ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮೋಡಗಳ ತಾಪಮಾನವು ಮೈನಸ್ 50 ಡಿಗ್ರಿ ಸೆಲ್ಸಿಯಸ್ಗಿಂತಲೂ ಕೆಳಗೆ ದಾಖಲಾಗಿದೆ. ಮತ್ತೊಂದೆಡೆ, ಮುಂಗಾರು ದ್ರೋಣ ರೇಖೆಯು ಪ್ರಸ್ತುತ ಇಡೀ ಉತ್ತರ ಭಾರತವನ್ನು ಆವರಿಸಿರುವುದರಿಂದ, ಮುಂಬರುವ ದಿನಗಳಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ವಿನಾಶಕಾರಿ ಹಾಗೂ ಭಾರಿ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ, (ಏಜೆನ್ಸೀಸ್).