ನ್ಯಾಷನಲ್ ಹೆರಾಲ್ಡ್ ಕೇಸ್; ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್ ಮೊರೆ ಹೋದ ಇಡಿ | National Herald case
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ
Published on:
Copied
Follow Us
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ(National Herald case) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ತನ್ನ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯವು ಹೈಕೋರ್ಟ್ ಮೆಟ್ಟಿಲೇರಿದೆ.
ಮಂಗಳವಾರ ದೆಹಲಿಯ ವಿಚಾರಣಾ ನ್ಯಾಯಾಲಯವು ತನ್ನ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ನಿರಾಕರಿಸಿದ ಬಳಿಕ ಜಾರಿ ನಿರ್ದೇಶನಾಲಯ ಇಂದು(ಡಿ. 19) ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ನೀಡಿದ 117 ಪುಟಗಳ ವಿಚಾರಣಾ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಇಡಿ ತನಿಖೆಯು ಕಾನೂನಿನಲ್ಲಿ ಸ್ವೀಕಾರಾರ್ಹವಲ್ಲ, ಯಾಕೆಂದರೆ ಅದು ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ಆಧರಿಸಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಿಎಂಎಲ್‌ಎ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಲು ಎಫ್‌ಐಆರ್ ಅಗತ್ಯ. ಎಫ್‌ಐಆರ್ ಇಲ್ಲದೆ ಹಣ ವರ್ಗಾವಣೆ ಪ್ರಕರಣದ ತನಿಖೆ ಮತ್ತು ಸಂಬಂಧಿತ ಪ್ರಾಸಿಕ್ಯೂಷನ್ ದೂರು ನಿಲ್ಲಲು ಸಾಧ್ಯವಿಲ್ಲ ಎಂದು ಇಡಿ ಚಾರ್ಜ್‌ಶೀಟ್ ಅನ್ನು ನಿರಾಕರಿಸಿ ಆದೇಶ ನೀಡಿದ್ದರು.
ಆದಾಗ್ಯೂ, ಅಕ್ಟೋಬರ್ 3ರಂದು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ದಾಖಲಿಸಿದ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯವು ತನ್ನ ತನಿಖೆಯನ್ನು ಮುಂದುವರಿಸಲು ನ್ಯಾಯಾಲಯವು ಅನುಮತಿ ನೀಡಿತ್ತು. ವಿಚಾರಣೆಯ ಸಮಯದಲ್ಲಿ ಸಂಸ್ಥೆಯು ಈ ಎಫ್‌ಐಆರ್ ಅನ್ನು ನ್ಯಾಯಾಲಯದ ಗಮನಕ್ಕೆ ತಂದಿತು. ಆದರೆ ಕೋರ್ಟ್ ಅದನ್ನು ಈಗಲೇ ಪರಿಶೀಲಿಸಿ ಆತುರದ ತೀರ್ಪೊ ನೀಡಲು ಸಾಧ್ಯವಿಲ್ಲ ಎಂದು ತಳ್ಳಿ ಹಾಕಿತ್ತು (ಏಜೆನ್ಸೀಸ್).