ಜೆಡಿಯು ಶಾಸಕಾಂಗ ಪಕ್ಷದ ಸಭೆ ಸೋಮವಾರ ನಡೆಯುವ ಸಾಧ್ಯತೆಗಳಿದ್ದು, ಎನ್ಡಿಎ ಮೈತ್ರಿಕೂಟದ ಮುಂದಿನ ಮುಖ್ಯಮಂತ್ರಿಯನ್ನು ಎರಡ್ಮೂರು ದಿನದಲ್ಲಿ ಘೋಷಿಸುವ ನಿರೀಕ್ಷೆ ಇದೆ. ಇತ್ತ ಬಿಜೆಪಿ ಸಣ್ಣ ಪುಟ್ಟ ಮಿತ್ರಪಕ್ಷಗಳೊಂದಿಗೆ ಸಂಪುಟದ ಸ್ಥಾನ ಹಂಚಿಕೆಯ ಕುರಿತಾಗಿ ಮಾತುಕತೆಗಳು ಆರಂಭವಾಗಲಿದ್ದು, ಎಚ್ಎಎಂ ಮುಖ್ಯಸ್ಥ, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ, ಆರ್ಎಲ್ಎಂನ ಉಪೇಂದ್ರ ಕುಶ್ವಾಹ, ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಇತರೆ ಹಿರಿಯ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.