

Nepal Floods: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ದಿಢೀರ್ ಪ್ರವಾಹಕ್ಕೆ ಸುಮಾರು 160 ಜನರು ಮೃತಪಟ್ಟಿದ್ದು, 133 ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಸ್ಥಳೀಯ ಪೊಲೀಸರು ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ. ಅಪಾಯದಲ್ಲಿರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ.