ಬಿಹಾರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಿತೀಶ್ ಕುಮಾರ್; ನಾಳೆ ದಾಖಲೆಯ 10ನೇ ಬಾರಿ ಸಿಎಂ ಆಗಿ ಪ್ರಮಾಣವಚನ | Nitish Kumar

ಎನ್​ಡಿಎ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ ಸಂದರ್ಭ
ಎನ್​ಡಿಎ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ ಸಂದರ್ಭ
Published on
ಪಾಟ್ನಾ: ಬಿಹಾರದಲ್ಲಿ ಇಂದು(ನ. 19) ಮಧ್ಯಾಹ್ನ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್(Nitish Kumar), ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಭೇಟಿಯಗಿದ್ದು ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ ಎಂದು ವರದಿಯಾಗಿದೆ. ನಾಳೆ ದಾಖಲೆಯ 10ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನ. 20ರಂದು ಪಾಟ್ನಾದಲ್ಲಿ ನಿತೀಶ್ ಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಸಿಎಂಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ನಿತೀಶ್ ಕುಮಾರ್ ಜೊತೆಗೆ 22 ಸಚಿವರು ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ ವರದಿಗಳು ಉಲ್ಲೇಖಿಸಿವೆ.
ಸಂಪುಟದಲ್ಲಿ ಜೆಡಿಯು ಹೆಚ್ಚಿನ ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಬಿಜೆಪಿಯಿಂದ 9 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಮರಳಿ ಡಿಸಿಎಂ ಆಗುವ ಸಾಧ್ಯತೆ ಇದೆ. ಇನ್ನು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ, ಮಾಜಿ ಮುಖ್ಯಮಂತ್ರಿ ಜಿತನ್ ಮಾಂಝಿ ಅವರ ಹಿಂದೂಸ್ತಾನ್ ಅವಾಮಿ ಮೋರ್ಚಾ ಮತ್ತು ಉಪೇಂದ್ರ ಕುಶ್ವಾಹಾ ಅವರ ರಾಷ್ಟ್ರೀಯ ಲೋಕ ಮೋರ್ಚಾದಿಂದ ತಲಾ ಒಬ್ಬರು ಸಂಪುಟದಲ್ಲಿ ಸೇರಲಿದ್ದಾರೆ ಎನ್ನಲಾಗಿದೆ.
243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 89, ಜೆಡಿ (ಯು) 85, ಎಲ್‌ಜೆಪಿ (ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗಳಿಸಿವೆ. ವಿರೋಧ ಪಕ್ಷಗಳು ಕೇವಲ 35 ಸ್ಥಾನಗಳಲ್ಲಿ ಗೆದ್ದಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net