ವೈದ್ಯರು ಅವರನ್ನು ಉಳಿಸಲು ಎಷ್ಟೇ ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಬಳಿಕ ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸಾವಿಗೆ ನಿಖರವಾದ ಕಾರಣ ಮತ್ತು ಘಟನೆಯ ಹಿಂದಿನ ಹಿನ್ನೆಲೆಯನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ನಂತರ ಪ್ರಕರಣಕ್ಕೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಹಾಗೂ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ, (ಏಜೆನ್ಸೀಸ್).