ನವದೆಹಲಿ/ದೋಹಾ: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವು ಈಗ ಜಾಗತಿಕ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದೆ. ಯುದ್ಧದ ಏಳನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರವಾದ ಕತಾರ್, ಇಡೀ ಜಗತ್ತಿಗೆ ಎಚ್ಚರಿಕೆಯೊಂದನ್ನು ನೀಡಿದೆ. ಒಂದು ವೇಳೆ ಸಂಘರ್ಷ ಹೀಗೇ ಮುಂದುವರಿದರೆ, ಕೇವಲ 2-3 ವಾರಗಳಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ 150 ಡಾಲರ್ ($150) ತಲುಪಲಿದೆ ಎಂದು ಕತಾರ್ ಇಂಧನ ಸಚಿವ ಸಾದ್ ಅಲ್-ಕಾಬಿ ಭವಿಷ್ಯ ನುಡಿದಿದ್ದಾರೆ.