ಇತ್ತೀಚೆಗೆ ನವದೆಹಲಿಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಶಿವಸೇನಾ (UBT) ಸಂಸದೀಯ ಸಭೆಗೆ ಪಕ್ಷದ ಒಟ್ಟು 9 ಲೋಕಸಭಾ ಸಂಸದರ ಪೈಕಿ 6 ಸಂಸದರು ಗೈರುಹಾಜರಾಗಿದ್ದರು. ನಾಗೇಶ್ ಅಷ್ಟೀಕರ್, ಸಂಜಯ್ ದೇಶ್‌ಮುಖ್, ಸಂಜಯ್ ಜಾಧವ್, ಸಂಜಯ್ ದಿನಾ ಪಾಟೀಲ್, ಓಂಪ್ರಕಾಶ್ ರಾಜೇನಿಂಬಾಳ್ಕರ್ ಮತ್ತು ಭೌಸಾಹೇಬ್ ವಾಕಚೌರೆ ಗೈರಾದ ಪ್ರಮುಖರಾಗಿದ್ದಾರೆ. ಈ ನಾಯಕರೆಲ್ಲರೂ ಒಟ್ಟಾಗಿ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಹಾಗೂ ಎನ್‌ಡಿಎ (NDA) ಮೈತ್ರಿಕೂಟದತ್ತ ಮುಖ ಮಾಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.