ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ದೊಡ್ಡ ಎಲೆಗಳಿಂದ ಆವೃತವಾಗಿರುವ ಮರದ ಒಂದು ಭಾಗವನ್ನು ನೋಡಬಹುದು. ಎಲೆಗಳ ನಡುವೆಯೇ ಒಂದು ಬೆಕ್ಕು ಅಡಗಿ ಕುಳಿತಿದೆ. ಅದು ಎಲ್ಲಿದೆ ಎಂಬುದನ್ನು ನೀವು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಹೀಗಾಗಿ ನೀವು ಕಣ್ಣಿಗೆ ಮಾತ್ರವಲ್ಲದೆ, ತಲೆಗೆ ಕೊಂಚ ಕೆಲಸ ಕೊಟ್ಟು ಸೂಕ್ಷ್ಮವಾಗಿ ಗಮನಿಸಿದರೆ ಬೆಕ್ಕು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.