ಜ. 28ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ; ಫೆ. 01ಕ್ಕೆ ಕೇಂದ್ರ ಬಜೆಟ್ ಮಂಡನೆ | Union Budget

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ನವದೆಹಲಿ: ಇದೇ ತಿಂಗಳು ಜ. 28ರಂದು ಸಂಸತ್​ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ. 01ರಂದು ವಿತ್ತ ಮಂತ್ರಿ ನಿರ್ಮಲಾ ಸೀತರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ಎಂದು ಶನಿವಾರ(ಜ. 10) ವರದಿಯಾಗಿದೆ.

ಈ ಕುರಿತು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿರುವ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ, ಜ. 28ರಂದು ಅಧಿವೇಶನದ ಆರಂಭಿಕ ದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ಗಂಟೆಗಳ ಕಾಲ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.

ಮರುದಿನ ಜ. 29ರಂದು ಬೀಟಿಂಗ್ ರಿಟ್ರೀಟ್ ಸಮಾರಂಭ ಇರುವುದರಿಂದ ಎರಡೂ ಸದನಗಳು ಸಭೆ ಸೇರುವುದಿಲ್ಲ. 30ರಂದು ನಡೆಯುವ ಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಾಗುವುದು. ಫೆ. 01 ಭಾನುವಾರದಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.

ಬಳಿಕ ರಾಷ್ಟ್ರಪತಿಗಳ ಭಾಷಣ ಮತ್ತು ಕೇಂದ್ರ ಬಜೆಟ್ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ಫೆಬ್ರವರಿ 13ರವರೆಗೆ ಚರ್ಚೆ ನಡೆಯಲಿದೆ. ಬಳಿಕ ಸುಮಾರು ಒಂದು ತಿಂಗಳು ಮುಂದೂಡಿಕೆ ಬಳಿಕ ಮಾರ್ಚ್ 9ರಿಂದ ಏ. 02ರವರೆಗೆ ಸಂಸತ್​ ಅಧಿವೇಶನ ನಡೆಯಲಿದೆ ಎನ್ನಲಾಗಿದೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net