ಎನ್ಡಿಎ ಸಂಸದೀಯ ಪಕ್ಷದ ಮಂಗಲ್ ಮಿಲನ್ ಸಭೆಯು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು ಎಂದ ರಿಜಿಜು, ಹಲವು ಪ್ರಮುಖ ರಾಷ್ಟ್ರೀಯ ವಿಷಯಗಳ ಕುರಿತು ಪ್ರಧಾನಿಯವರು ಸಂಸದರಿಗೆ ಮಾರ್ಗದರ್ಶನ ನೀಡಿದರು ಎಂದರು. ಕಳೆದ ಕೆಲವು ತಿಂಗಳುಗಳಲ್ಲಿ ದೇಶ ಸಾಧಿಸಿದ ಪ್ರಮುಖ ಮೈಲಿಗಲ್ಲುಗಳನ್ನು ಪ್ರಸ್ತಾಪಿಸಿದ ಮೋದಿ, ವಿವಿಧ ದೇಶಗಳೊಂದಿಗೆ ಭಾರತ ಇತ್ತೀಚೆಗೆ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದಗ ಕುರಿತೂ ಚರ್ಚಿಸಿದರು.
ವಿದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವಾಗ ಸರ್ಕಾರ ಯಾವುದೇ ಕಾರಣಕ್ಕೂ ರೈತರ ಹಿತಾಸಕ್ತಿಯ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿ ಎನ್ಡಿಎ ಸಂಸದರಿಗೆ ಭರವಸೆ ನೀಡಿದ್ದಾರೆ. ಭಾರತ ಸಹಿ ಮಾಡುವ ಪ್ರತಿಯೊಂದು ಮುಕ್ತ ವ್ಯಾಪಾರ ಒಪ್ಪಂದವೂ ರೈತರ ಕಲ್ಯಾಣಕ್ಕೆ ಮೊದಲ ಆದ್ಯತೆ ನೀಡುತ್ತದೆ ಮತ್ತು ಅವರ ಮೇಲೆ ಯಾವುದೇ ರೀತಿಯ ವಿಪರೀತ ಪರಿಣಾಮ ಬೀರದಂತೆ ನೋಡಿಕೊಳ್ಳುತ್ತದೆ. ದೇಶದ ಆರ್ಥಿಕ ಹಿತಾಸಕ್ತಿ ಹಾಗೂ ಕೃಷಿಕರ ಹಿತರಕ್ಷಣೆಯನ್ನು ಒಟ್ಟಿಗೆ ಕಾಯ್ದುಕೊಳ್ಳುವುದರಲ್ಲೇ ವ್ಯಾಪಾರ ಒಪ್ಪಂದದ ನೈಜ ಯಶಸ್ಸು ಅಡಗಿದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ ಎಂದು ರಿಜಿಜು ಮಾಹಿತಿ ನೀಡಿದರು(ಏಜೆನ್ಸೀಸ್).